LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಶೀಘ್ರ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ?

ಬೆಂಗಳೂರು : ರಾಜ್ಯ ರಾಜಕೀಯ ದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ಕರೆಯುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಹೇಳಿದ್ದಾರೆ.
ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ ಹೈಕಮಾಂಡ್ ಸಭೆ ನಿಗದಿಯಾಗಿರುವ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿನಿಂದ ದೆಹಲಿಗೆ ತೆರಳಿದರು.
ದೆಹಲಿಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಖರ್ಗೆಯವರು, ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಇಬ್ಬರೂ ಇರುತ್ತಾರೆ. ಹೈಕಮಾಂಡ್ ಅಂದರೆ ಏಕಾಂಗಿ ಅಲ್ಲ. ಒಂದು ಟೀಮ್. ಹೈಕಮಾಂಡ್ ಟೀಮ್ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳುತ್ತದೆ ಎಂದು ಹೇಳಿದರು. ದೆಹಲಿಯ ಕಾಂಗ್ರೆಸ್ ಭವನದಲ್ಲಿಂದು ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ನಡೆಯಲಿದ್ದು, ಯಾರು ಸಿಎಂ ಬೇಕು ಅನ್ನೋದರ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸಭೆಯಲ್ಲಿ ಹಾಜರಿರಲಿದ್ದಾರೆ.
ಈ ನಡುವೆ ರಾಜ್ಯದಲ್ಲಿ ಹೆಚ್ಚುತ್ತಿರುವ ನಾಯಕತ್ವ ಗದ್ದಲದ ಮಧ್ಯೆ, ಸಿದ್ದರಾಮಯ್ಯ ಅವರು ಗುರುವಾರ ತಮ್ಮ ನಿವಾಸದಲ್ಲಿ ಜಿ. ಪರಮೇಶ್ವರ, ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಮತ್ತು ಕೆ.ಎನ್. ರಾಜಣ್ಣ ಸೇರಿದಂತೆ ಹಿರಿಯ ಸಚಿವರು ಮತ್ತು ಆಪ್ತ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ಸಭೆ ತೀವ್ರ ಕುತೂಹಲ ಮೂಡಿಸಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!