LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ನಂದಿನಿ ಬ್ರ್ಯಾಂಡ್ ಸರ್ವನಾಶಕ್ಕೆ ಮುಂದಾದ ಸರ್ಕಾರ: ಆರ್. ಅಶೋಕ

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ನಂದಿನಿ ಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶ, ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿದೆ ಎಂದು ಹೇಳಿದ್ದಾರೆ.

ಈಗ ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಡೈರಿ ಮಳಿಗೆಗಳನ್ನು ಸ್ಥಾಪಿಸಲು ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಲೂ ಯಾರೂ ಆಸಕ್ತಿ ತೋರುತ್ತಿಲ್ಲ. ಇದು ನಂದಿನಿ ಬ್ರ್ಯಾಂಡ್ ಪರಿಸ್ಥಿತಿಯಾಗಿದೆ. ನಾಡಿನ ರೈತರು, ನಿಷ್ಠಾವಂತ ಗ್ರಾಹಕರು ಕಷ್ಟಪಟ್ಟು ಕಟ್ಟಿರುವ ನಂದಿನಿ ಬ್ರ್ಯಾಂಡ್ ಅನ್ನ ಸರ್ವನಾಶ ಮಾಡಲು ಸಿದ್ದರಾಮಯ್ಯ ಅವರು ಶಪಥ ಮಾಡಿದಂತಿದೆ ಎಂದಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ