E-PAPER
28 Nov 2026, 12:10:12 PM|
Gold₹12654/gGold24K ₹12,654/g - 22K ₹11,589/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ ಮೊಲಗಳ ಬೇಟೆ: ಮೂವರು ವಶಕ್ಕೆ

ಬಳ್ಳಾರಿ: ನಗರದ ಹೊರವಲಯದಲ್ಲಿ ಬೆಂಗಳೂರು ರಸ್ತೆಯಲ್ಲಿನ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ನಿನ್ನೆ ಬೆಳಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ, ಕಾಡು ಮೊಲಗಳನ್ನು ಬೇಟೆಯಾಡಿದ ಘಟನೆ ನಡೆದಿದ್ದು, ಈ ಸಂಬAಧ ಮುವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಾದೇಶಿಕ ವಿಭಾಗದ ಉಪ-ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ಪ್ರಾದೇಶಿಕ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ (ಮಿಂಚೇರಿ ಗ್ರಾಮದ ಸರ್ವೆ ನಂಬರ್ 65ರ ಬಸಪ್ಪನ ಕೊಳ್ಳದ ಸಮೀಪ) ನಿನ್ನೆ ನ.26ರಂದು ಬೆಳಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಮೂವರು ಯುವಕರು ಅರಣ್ಯದೊಳಕ್ಕೆ ತೆರಳಿ, ಒಟ್ಟಾರೆಯಾಗಿ 11 ಕಾಡು ಮೊಲಗಳನ್ನು ಬೇಟೆಯಾಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬAಧಿಸಿದAತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು, ವನ್ಯಜೀವಿ ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಕೋನಾಪುರ ಗ್ರಾಮದ ಬಿ.ಟಿ.ಆಂಜನೇಯ (33), ನಿಂಗಣ್ಣ (31) ಹಾಗೂ ಗಂಗಾಧರ (27) ಎಂದು ಗುರುತಿಸಲಾಗಿದೆ ಎಂದು ಉಪ-ಅರಣ್ಯ ಸಂರಕ್ಷಣಾಧಿಕಾರಿಗಳು ವಿವರಿಸಿದ್ದಾರೆ.
ಆರೋಪಿಗಳನ್ನು ಬಳ್ಳಾರಿಯ ಮೂರನೇ ಹೆಚ್ಚುವರಿ ಪ್ರಥಮ ದರ್ಜೆ ಸಿವಿಲ್ ನ್ಯಾಯಾಲಯದ ನ್ಯಾಯಧೀಶರ ಮುಂದೆ ಹಾಜರು ಪಡಿಸಲಾಗಿದೆ.
ಅರಣ್ಯ ಅಧಿಕಾರಿಗಳ ಮನವಿ: ವನ್ಯಜೀವಿಗಳು ಪ್ರಕೃತಿಯ ಅಮೂಲ್ಯ ಸಂಪತ್ತಾಗಿದ್ದು, ಅವುಗಳ ಸಂರಕ್ಷಣೆಯು ಪ್ರತಿಯೊಬ್ಬರ ನಾಗರೀಕರ ಜವಾಬ್ದಾರಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಅಕ್ರಮ ಬೇಟೆ, ವನ್ಯಜೀವಿಗಳ ಹತ್ಯೆ, ಹಾಗೂ ವನ್ಯ ಜೀವಿಗಳ ಸಂರಕ್ಷಣಾ ಕಾಯಿದೆಯನ್ನು ಉಲ್ಲಂಘಿಸುವವರ ವಿರುದ್ಧ ಅರಣ್ಯ ಇಲಾಖೆಯು ಕಠಿಣ ಕ್ರಮ ಕೈಗೊಳ್ಳಲಿದೆ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಎಪಿಎಂಸಿ ಮಾರುಕಟ್ಟೆ ಅಂಗಡಿಗಳ ಮೇಲೆ ಎಸಿ ದಾಳಿ :ಪಡಿತರ ಅಕ್ಕಿ ಮಿಶ್ರಣದ ಜಾಲ ಪತ್ತೆಪರೀಕ್ಷಾ ಸಮಯದಲ್ಲಿ ಪ್ರೌಢ ಶಾಲಾ ಶಿಕ್ಷಕರನ್ನು ಜನಗಣತಿಗೆ ನಿಯೋಜಿಸುವುದಿಲ್ಲ: ಸಚಿವ ಮಧು ಬಂಗಾರಪ್ಪಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ ಮೊಲಗಳ ಬೇಟೆ: ಮೂವರು ವಶಕ್ಕೆಮೇಕೆದಾಟು ಯೋಜನೆ: ತಮಿಳುನಾಡು ರಾಜ್ಯವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ಕ್ಷೇತ್ರ ಪುನರ್‌ವಿಂಗಡಣೆ-ಮಹಿಳಾ ಮೀಸಲು ಮಸೂದೆಗೆ ಕೇಂದ್ರ ಸಚಿವ ಸಂಪುಟ ಅಸ್ತುಸಚಿವ ಸಂಪುಟದ ಖಾಲಿ ಸ್ಥಾನಗಳಲ್ಲಿ ಮಹಿಳೆ, ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಿ: ಸಿದ್ದರಾಮಯ್ಯಹಿರಿಯೂರು ಉಪ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಆತುರವಿಲ್ಲ - ಎಚ್.ಡಿ.ಕುಮಾರ ಸ್ವಾಮಿಚಿತ್ರನಟಿ ಸುಧಾರಣಿಗೆ ಜೀವಮಾನ ಸಾಧನೆ ಪ್ರಶಸ್ತಿಮುಖ್ಯಮಂತ್ರಿ ಜಪಾನ್‌ ನಲ್ಲಿ, ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ: ಬಿ.ವೈ. ವಿಜಯೇಂದ್ರಜನತಾ ಬಜಾರ್ ಅಧ್ಯಕ್ಷರಾಗಿ ವೆಂಕಟೇಶ್ ಹೆಗಡೆ ಅವಿರೋಧ ಆಯ್ಕೆ