LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ರಾಮಚಂದ್ರ ರಾವ್ ಪ್ರಕರಣ “ಎಐ” ಅಲ್ಲ ಅಸಲಿ, ಎಫ್‍ಎಸ್‍ಎಲ್ ವರದಿಯಲ್ಲಿ ಸತ್ಯ ಬಯಲು

ಬೆಂಗಳೂರು : ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರುವ, ಅಮಾನತುಗೊಂಡಿರುವ ಹಿರಿಯ ಐಪಿಎಸ್‌‍ ಅಧಿಕಾರಿ ಹಾಗೂ ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರ ವೈರಲ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವೊಂದು ಎದುರಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವು ಯಾವುದೇ ರೀತಿಯ ಡೀಪ್‌ಫೇಕ್‌, ಕೃತಕ ಬುದ್ಧಿಮತ್ತೆ ನಿರ್ಮಿತ ಅಥವಾ ಎಡಿಟ್‌ ಮಾಡಲಾದ ದೃಶ್ಯಗಳಲ್ಲ ಎಂಬುದು ಇದೀಗ ಅಧಿಕೃತವಾಗಿ ದೃಢಪಟ್ಟಿದೆ. ಈ ಮೂಲಕ ನಿವೃತ್ತಿಯ ಅಂಚಿನಲ್ಲಿರುವ ಹಿರಿಯ ಪೊಲೀಸ್‌‍ ಅಧಿಕಾರಿಗೆ ತೀವ್ರ ಕಾನೂನಿನ ಸಂಕಷ್ಟ ಎದುರಾಗಿದೆ.
ರಾಜ್ಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರವು ಹೆಚ್ಚುವರಿ ಪೊಲೀಸ್‌‍ ಮಹಾನಿರ್ದೇಶಕ ಆರ್‌. ಹಿತೇಂದ್ರ ಅವರ ನೇತೃತ್ವದಲ್ಲಿ ನಾಲ್ವರು ಐಪಿಎಸ್‌‍ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿತ್ತು.
ಇದೀಗ ಈ ಉನ್ನತ ಮಟ್ಟದ ಸಮಿತಿಯು ಸರ್ಕಾರಕ್ಕೆ ಬರೋಬ್ಬರಿ 100 ಪುಟಗಳ ಸಮಗ್ರ ವರದಿಯನ್ನು ಸಲ್ಲಿಸಿದ್ದು, ವಿಡಿಯೋ ಅಸಲಿಯತ್ತನ್ನು ಸಂಪೂರ್ಣವಾಗಿ ಬಯಲು ಮಾಡಿದೆ.

 

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!