LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Entertainment News

ರವಿ ಬೆಳಗೆರೆ ಕೃತಿ : ಭೀಮಾತೀರದ ಹಂತಕರು ಬೆಳ್ಳಿತೆರೆಗೆ

ಬೆಂಗಳೂರು: ತೊಂಭತ್ತರ ದಶಕದಲ್ಲಿ ಭೀಮಾತೀರದ ವಿಜಯಪುರ ಜಿಲ್ಲೆಯ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಘನಘೋರ ರಕ್ತಚರಿತ್ರೆಯನ್ನು ತೆರೆಯ ಮೇಲೆ ತರಲು ಹೊರಟಿದ್ದಾರೆ ನಿರ್ದೇಶಕ ನರೇಂದ್ರಬಾಬು. ಕಬಡ್ಡಿ ಬಾಬು ಎಂದೇ ಹೆಸರಾದ ಇವರು ಸಂತೆಯಲ್ಲಿ ನಿಂತ ಕಬೀರ, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಮುಂತಾದ ಚಿತ್ರಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು.
ಭೀಮಾತೀರದ ಹಂತಕರು ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರ ಕೃತಿ. ಇದೇ ಪುಸ್ತಕವನ್ನಾಧರಿಸಿ ಬಾಬು ಈ ಚಿತ್ರವನ್ನು ಕಟ್ಟಿಕೊಡಲು ಹೊರಟಿದ್ದಾರೆ. 'ಭೀಮಾತೀರದ ಹಂತಕರು' ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ನಡೆಯಿತು. ಭಾವನಾ ಬೆಳಗೆರೆ ಅವರು ಈ ಚಿತ್ರದಲ್ಲಿ ತಮ್ಮ ತಂದೆಯ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ.
ಶ್ರೀ ಗವಿ ರಂಗನಾಥಸ್ವಾಮಿ ಪಿಕ್ಚರ್ಸ್ ಹಾಗೂ ಆಂಜನೇಯ ಪ್ರೊಡಕ್ಷನ್ಸ್ ಮೂಲಕ ಶೃತಿ ಅನಿಲ್ ಕುಮಾರ್ ಹಾಗೂ ಸುನ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ನರೇಂದ್ರಬಾಬು ಮಾತನಾಡುತ್ತ "ಕ್ರಿಸ್ತ ಪೂರ್ವದಿಂದ ಈವರೆಗೂ ಭೀಮೆಯ ತಟದಲ್ಲಿ ಯುದ್ದ ನಡೆಯುತ್ತಲೇ ಇದೆ. ಒಂದು ಸಣ್ಣ ಬದುವಿಗೋಸ್ಕರ ಚಂದಪ್ಪ ಹರಿಜನ ಹಾಗೂ ಕೇಶಪ್ಪ ತಾವರಖೇಡ ಕುಟುಂಬಗಳ ನಡುವೆ ಶುರುವಾಗುವ ಗಲಾಟೆ, ದೊಡ್ಡಮಟ್ಟದಲ್ಲಿ ಮುಂದುವರೆದುಕೊಂಡು ಹೋಗಿ ಘೋರ ಕೊಲೆಗಳೇ ನಡೆದು ಹೋಗುತ್ತವೆ. ರವಿ ಬೆಳಗೆರೆ ಅವರು ಘಟನೆ ನಡೆದ ಸ್ಥಳಕ್ಕೇ ಹೋಗಿ ವಸ್ತುಸ್ಥಿತಿ ಅಧ್ಯಯನ ಮಾಡಿ ಬರೆದ ಕೃತಿಯನ್ನು ಯಥಾವತ್ತಾಗಿ ತೆರೆ ಮೇಲೆ ತರುತ್ತಿದ್ದೇವೆ. ಭಾವನಾ ಮೇಡಂ ಅವರೂ ನಮಗೆ ಸಾಥ್ ನೀಡುತ್ತಿದ್ದಾರೆ. ಇದರಲ್ಲಿ ತುಂಬಾ ಕಂಟೆಂಟ್ ಇರೊದ್ರಿಂದ ಚಿತ್ರವನ್ನು ಎರಡು ಭಾಗದಲ್ಲಿ ಹೇಳುತ್ತಿದ್ದೇವೆ. ಮೊದಲ ಭಾಗದ ಸ್ಕ್ರಿಪ್ಟ್ ಈಗಾಗಲೇ ರೆಡಿ ಇದೆ. ಸಿದ್ದಪ್ಪ ಅವರ ಹತ್ಯೆಯಾಗುವವರೆಗೂ ನಡೆಯುವ ಘಟನೆಗಳನ್ನು ಇದರಲ್ಲಿ ದಾಖಲಿಸಿದ್ದೇನೆ. ಸದ್ಯದಲ್ಲೇ ಚಿತ್ರೀಕರಣಕ್ಕೆ ಹೋಗುತ್ತಿದ್ದೇವೆ" ಎಂದರು.

ಭಾವನಾ ಬೆಳಗೆರೆ "ಅಪ್ಪನ ಪಾತ್ರ ಮಾಡಲು ನನಗೆ ತುಂಬಾ ಖುಷಿಯಾಗ್ತಿದೆ. ಹಿಂದೆ ಬಂದಿದ್ದ ಚಿತ್ರಕ್ಕೂ ಈ ಚಿತ್ರಕ್ಕೂ ತುಂಬಾ ವ್ಯತ್ಯಾಸವಿರುತ್ತದೆ. ಒಂದು ಕಾಲದಲ್ಲಿ ಭೀಮೆಯ ತಟದಲ್ಲಿ ರಕ್ತದೋಕುಳಿಯೇ ಹರಿದಿತ್ತು. ಆ ಘಟನೆಯಲ್ಲಿ 60-70 ತಲೆಗಳು ಉರುಳಿದ್ದವು. ಆ ಜಿದ್ದು ಈಗಲೂ ಇದೆ. ಒಂದು ಮರಕ್ಕೆ ಹುಟ್ಟಿಕೊಳ್ಳುವಂಥ ದ್ವೇಷವದು. ನಾವು ಅವರ ಮನೆಗೆ ಹೋಗಿ ಊಟ ಮಾಡಿದ್ದೇವೆ. ಅಪ್ಪ ಬರೆದ ಪುಸ್ತಕದಲ್ಲಿ ಹೇಗಿದೆಯೋ ಹಾಗೇ ಚಿತ್ರವೂ ಬರಬೇಕೆನ್ನುವುದು ನನ್ನ ಆಸೆ" ಎಂದರು.
ಛಾಯಾಗ್ರಾಹಕ ಕೆ.ಎಸ್.ಚಂದ್ರಶೇಖರ್ "ಇದು ರಿಯಲಿಸ್ಟಿಕ್ ಸಬ್ಜೆಕ್ಟ್ ಆಗಿರುವುದರಿಂದ ಹಾಗೇ ಚಿತ್ರಿಸಬೇಕು ನನಗೂ ಇದು ಹೊಸದು" ಎಂದರು.
ಸಂಗೀತ ನಿರ್ದೇಶಕ ಲೋಕಿ ತವಸ್ಯ "ಒಂದು ಪ್ಯಾಟ್ರನ್ ನಲ್ಲಿ ಇಡೀ ಸಿನಿಮಾ ಕಟ್ಟಿಕೊಡಬೇಕು ಎಂದು ಬಾಬು ಹೇಳಿದ್ದಾರೆ. ಗೋಪಾಲ ವಾಜಪೇಯಿ ಅವರ ಒಂದು ಹಾಡನ್ನು ಬಳಸಿಕೊಳ್ಳುತ್ತಿದ್ದೇವೆ" ಎಂದರು.
ನಿರ್ಮಾಪಕಿಯರಾದ ಸುಮ ಹಾಗೂ ಶೃತಿ ಅನಿಲ್ ಕುಮಾರ್ "ಈ ಮೊದಲು ಕಾದಂಬರಿ ಆಧಾರಿತ ಚಿತ್ರ ಮಾಡಿದ್ದೆವು. ಈಗಲೂ ಬೆಳಗೆರೆ ಅವರ ಕೃತಿ ಆಧರಿಸಿ ಮಾಡುತ್ತಿದ್ದೇವೆ" ಎಂದರು.
ಈ ಚಿತ್ರದಲ್ಲಿ ಯುವನಟ ಲಿಖಿತ್ ಚಂದಪ್ಪ ಹರಿಜನ ಪಾತ್ರ ಮಾಡುತ್ತಿದ್ದಾರೆ. ಉಳಿದಂತೆ ಜಯವರ್ಧನ, ಸಯ್ಯಾಜಿ ಶಿಂಧೆ, ಶರತ್ ಲೋಹಿತಾಶ್ವ, ಸೋನು ಸೂದ್ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.
ಹರೀಶ್ ಕೊಮ್ಮೆ ಸಂಕಲನ, ರವಿವರ್ಮ ಸಾಹಸ ಸಂಯೋಜನೆ, ಬಾಬುಖಾನ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ