LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ದ್ವಿತೀಯ ಪಿಯುಸಿ-2 ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ-2 ಪಲಿತಾಂಶವನ್ನು ಇಂದು (ಮೇ 16) ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಶೇಕಡಾ 31.27ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಏಪ್ರಿಲ್ 24ರಿಂದ ಮೇ 8ರವರೆಗೆ ನಡೆದಿದ್ದ (2ನೇ) ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು. 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದ 71,964 ವಿದ್ಯಾರ್ಥಿಗಳು ಪರೀಕ್ಷೆ-2 ಅನ್ನೂ ಬರೆದಿದ್ದಾರೆ. ಇವರಲ್ಲಿ 41,719 ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ-3 ಯಾವಾಗ?

ಜೂನ್ 9ರಿಂದ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ-3 ನಡೆಯಲಿದೆ. ದ್ವಿತೀಯ ಪಿಯು

ದ್ವಿತೀಯ ಪಿಯು ಫಲಿತಾಂಶ ನೋಡುವುದು ಹೇಗೆ?

ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿಯೂ ಅಪ್ಲೋಡ್ ಮಾಡಲಾಗುತ್ತದೆ. karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

ದ್ವಿತೀಯ ಪಿಯು ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.

ಹೋಂ ಪೇಜ್ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.

ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.

Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.

ಈಗ ನೀವು ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಇರುತ್ತದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ