LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಶುಕ್ರವಾರ ದೆಹಲಿ ಪ್ರವಾಸ: ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶುಕ್ರವಾರ ದೆಹಲಿ ಪ್ರವಾಸ ಕೈಗೊಂಡಿದ್ದು ಕಾಂಗ್ರೆಸ್‌‍ನಲ್ಲಿ ಚಟುವಟಿಕೆಗಳು ಮತ್ತಷ್ಟು ಗದರಿಗೆದರಿವೆ.

ಸಚಿವ ಸಂಪುಟ ಪುನರ್‌ ರಚನೆ, ರಾಜ್ಯಸಭೆ, ವಿಧಾನಪರಿಷತ್‌ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಹೈಕಮಾಂಡ್‌ ನಾಯಕರ ಜೊತೆ ನಾಳೆಯ ಭೇಟಿಯ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚರ್ಚೆ ನಡೆಸುವ ಸಾಧ್ಯತೆ ಇದೆ.

ಪೂರ್ವ ನಿಗದಿತ ಕಾರ್ಯಕ್ರಮಗಳ ಪ್ರಕಾರ ಸಿದ್ದರಾಮಯ್ಯ ಅವರು, ದೆಹಲಿಗೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ. ಆದರೆ ಡಿ.ಕೆ.ಶಿವಕುಮಾರ್‌ ಅವರ ಭೇಟಿ ಇನ್ನೂ ಖಚಿತವಾಗಿಲ್ಲ. ಈಗಾಗಲೇ 20ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಅವರಲ್ಲಿ ಕೆಲವರು ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್‌‍ ಬರುತ್ತಿದ್ದು, ನಾಳೆ ಟಿ.ಬಿ.ಜಯಚಂದ್ರ ಸೇರಿದಂತೆ ಪ್ರಮುಖ ನಾಯಕರು ದೆಹಲಿಯಲ್ಲೇ ಉಳಿದುಕೊಳ್ಳಲಿದ್ದಾರೆ.

ಟಿ.ಬಿ.ಜಯಚಂದ್ರ ಅವರು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸಂಸತ್ತಿನ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ರಾಜ್ಯದ ನಾಯಕರುಗಳ ಜೊತೆ ಯಾವ ರೀತಿ ಚರ್ಚೆ ನಡೆಸಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ