LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ

ಬೆಂಗಳೂರು: ರೇಣುಕಾ ಸ್ವಾಮಿ  ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್​ಗೆ ಇದೀಗ ಮತ್ತೊಂದು ಪ್ರಕರಣದಲ್ಲಿ ಸಮನ್ಸ್ ಜಾರಿ ಆಗಿದೆ. ದರ್ಶನ್ ಮಾತ್ರವೇ ಅಲ್ಲದೆ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೂ ಸಹ ಸಮನ್ಸ್ ಜಾರಿ ಆಗಿದೆ. ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದರು ಈ ಬಗ್ಗೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಆಗಿದೆ.

‘ಬಾರ್‌ ಹೆಡೆಡ್‌ ಗೂಸ್‌’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ದಾಳಿ ಮಾಡಿದ್ದ ಅರಣ್ಯಾಧಿಕಾರಿಗಳು, ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ಈ ಹಿಂದೆ ಪ್ರಕರಣ ದಾಖಲಾಗಿದ್ದಾಗ, ಬಾತುಕೊಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆಯನ್ನು ನೀಡಿದ್ದರು ದರ್ಶನ್, ಬಾತುಕೋಳಿಗಳನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಿದ್ದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!