LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ: ಸುಬ್ಬಾರೆಡ್ಡಿ ಶಾಸಕ ಸ್ಥಾನಕ್ಕೆ ಮರುಜೀವ

ನವದೆಹಲಿ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಕಾಂಗ್ರೆಸ್ ನಾಯಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಲಭಿಸಿದ್ದು, ಶಾಸಕ ಸ್ಥಾನಕ್ಕೆ ಮರುಜೀವ ಸಿಕ್ಕಂತಾಗಿದೆ.

ಆದಾಯವನ್ನು ಬಹಿರಂಗಪಡಿಸುವುದು ಮಾತ್ರ ಸಾಕೇ? ಅಥವಾ ವ್ಯವಹಾರ ಸಂಬಂಧಿತ ಮಾಹಿತಿಯನ್ನೂ ಕಡ್ಡಾಯವಾಗಿ ಬಹಿರಂಗಪಡಿಸಬೇಕೇ? ಎಂಬ ಪ್ರಶ್ನೆಗೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಜೊತೆಗೆ, ಎದುರಾಳಿ ಅಭ್ಯರ್ಥಿ ಸಿ. ಮುನಿರಾಜು ಅವರು ಆರು ವಾರಗಳೊಳಗೆ ತಮ್ಮ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಲಾಗಿದೆ.

ಈ ಹಿಂದೆ, ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರದಲ್ಲಿ ಆಸ್ತಿ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿಲ್ಲ ಹಾಗೂ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅವರ ಆಯ್ಕೆಯನ್ನು ರದ್ದುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪರ-ವಿರೋಧ ವಾದಗಳನ್ನು ಆಲಿಸಿದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾಗೊಳಿಸಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿತ್ತು. ಆದರೆ, ಮುನಿರಾಜು ಅವರನ್ನು ವಿಜಯಿಯಾಗಿ ಘೋಷಿಸಿರಲಿಲ್ಲ.

ಹೈಕೋರ್ಟ್ ಆದೇಶಕ್ಕೆ ಆರು ತಿಂಗಳೊಳಗೆ ತಡೆಯಾಜ್ಞೆ ಸಿಗದಿದ್ದರೆ, ಬಾಗೇಪಲ್ಲಿ ಕ್ಷೇತ್ರದಲ್ಲಿ ಮರುಚುನಾವಣೆ ಅನಿವಾರ್ಯವಾಗುವ ಸಾಧ್ಯತೆ ಇತ್ತು. ಈ ಹಿನ್ನೆಲೆ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಇದೀಗ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ, ಸುಬ್ಬಾರೆಡ್ಡಿಗೆ ಕಾನೂನು ಹೋರಾಟದಲ್ಲಿ ಪ್ರಥಮ ಜಯ ಸಿಕ್ಕಂತಾಗಿದೆ. ಮುಂದಿನ ವಿಚಾರಣೆಯಲ್ಲಿ ಅಂತಿಮ ತೀರ್ಪು ಏನಾಗಲಿದೆ ಎಂಬುದು ಕಾದು ನೋಡಬೇಕಾಗಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!