LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Crime News

ಸಿಡ್ನಿ ಬೀಚ್‌ನಲ್ಲಿ ಭಯೋತ್ಪಾದನಾ ಅಟ್ಟಹಾಸ: 16 ಯಹೂದಿಗಳ ನರಮೇಧ

ಸಿಡ್ನಿ: ಸಿಡ್ನಿಯ ಪ್ರವಾಸಿ ತಾಣ ಬೋಂಡಿ ಬೀಚ್‌ನಲ್ಲಿ ಯಹೂದಿಗಳ ‘ಹನುಕ್ಕಾ ಹಬ್ಬ’ದ ಪ್ರಯುಕ್ತ ಜಮಾವಣೆಯಾಗಿದ್ದ ಸುಮಾರು 2000 ಯಹೂದಿಗಳ ಮೇಲೆ ಬಂದೂಕುಧಾರಿಗಳಿಬ್ಬರು ನಡೆಸಿದ ಯದ್ವಾತದ್ವಾ ಗುಂಡಿನ ದಾಳಿಯಲ್ಲಿ 16 ಮಂದಿ ಮೃತಪಟ್ಟಿದ್ದಾರೆ.
ಪೊಲೀಸರು ನಡೆಸಿದ ಪ್ರತಿ ದಾಳಿಯಲ್ಲಿ ಒಬ್ಬ ದಾಳಿಕೋರ ಮೃತಪಟ್ಟಿದ್ದಾನೆ. ಇನ್ನೊಬ್ಬನನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ 42 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಗುAಡಿನ ದಾಳಿಯನ್ನು ಆಸ್ಟ್ರೇಲಿಯಾ ಪೊಲೀಸರು ‘ಭಯೋತ್ಪಾದಕ ಕೃತ್ಯ’ ಎಂದು ಘೋಷಿಸಿದ್ದು ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ ದಾಳಿಕೋರನಿಗೆ ಸೇರಿದ ವಾಹನದಿಂದ ಕಚ್ಚಾ ಬಾಂಬ್ ಅನ್ನು ವಶಕ್ಕೆ ಪಡೆಯಲಾಗಿದೆ. ಗಾಯಗೊಂಡಿರುವ ಆರೋಪಿ ಸಿಡ್ನಿಯಲ್ಲಿ ಡ್ರೈವರ್ ಆಗಿದ್ದ ನವೀದ್ ಅಕ್ರಮ್ (24) ಎಂದು ಗುರ್ತಿಸಲಾಗಿದೆ. ಈತ ಪಾಕಿಸ್ತಾನ ಮೂಲದವನು ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಸಾಮೂಹಿಕ ಗುಂಡಿನ ದಾಳಿಗೆ ಕಾರಣ ಏನು ಎನ್ನುವುದನ್ನು ಇನ್ನೂ ಆಸ್ಟ್ರೇಲಿಯಾದ ಸರ್ಕಾರ ಖಚಿತಪಡಿಸಿಲ್ಲ. ಯೆಹೂದಿಗಳ ಎಂಟು ದಿನಗಳ ಚಳಿಗಾಲದ ‘ದೀಪಗಳ ಹಬ್ಬ’ದ ಮೊದಲ ದಿನವಾದ ಭಾನುವಾರ ಎರಡು ಸಾವಿರಕ್ಕೂ ಹೆಚ್ಚು ಜನರು ಬೋಂಡಿ ಕಡಲ ತೀರದಲ್ಲಿ ಸೇರಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಘಟನೆಯನ್ನು ಆಸ್ಟ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಯಹೂದಿಗಳ 'ಹನಕ್ಕಾ' ಧಾರ್ಮಿಕ ಹಬ್ಬ 8 ದಿನಗಳ ಕಾಲ ನಡೆಯುತ್ತದೆ. ಭಾನುವಾರ ಹಬ್ಬದ ಮೊದಲ ದಿನವಾಗಿದ್ದು, 1000-2000 ಯಹೂದಿಗಳು ಹಬ್ಬದ ಆಚರಣೆಗಾಗಿ ಸಿಡ್ನಿಯ ಬೋಂಡಿ ಕಡಲತೀರದಲ್ಲಿ ಸೇರಿದ್ದರು. ಸಂಜೆ 6:30ರ ಸುಮಾರಿಗೆ (ಆಸ್ಟ್ರೇಲಿಯಾ ಕಾಲಮಾನ) ಇಬ್ಬರು ಬಂದೂಕುಧಾರಿಗಳು ಸ್ಥಳಕ್ಕೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ. 50 ಬಾರಿ ಗುಂಡು ಹಾರಿಸಿರುವುದು ವರದಿಯಾಗಿದೆ. ಉಗ್ರರು ಮಕ್ಕಳು ಮತ್ತು ವೃದ್ಧರನ್ನೇ ಗುರಿಯಾಗಿಸಿ ದಾಳಿ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ವಿಡಿಯೊ ಚಿತ್ರೀಕರಣ ಮಾಡಿದ್ದು, ಅದನ್ನು ಆಸ್ಟ್ರೇಲಿಯಾದ ಕೆಲವು ಸುದ್ದಿ ವಾಹಿನಿಗಳು ಪ್ರಸಾರ ಮಾಡಿವೆ. ಈ ವಿಡಿಯೊ ತುಣುಕಿನಲ್ಲಿ ದಾಳಿಕೋರರಲ್ಲಿ ಒಬ್ಬನನ್ನು ತಡೆಯಲು ಜನರು ಮುಂದಾಗುತ್ತಿರುವ ದೃಶ್ಯವಿದೆ.

ಪ್ರಮುಖ ದಾಳಿಗಳು

*ಆಸ್ಟ್ರೇಲಿಯಾದಲ್ಲಿ ಸಾಮೂಹಿಕ ಗುಂಡಿನ ದಾಳಿಗಳು ನಡೆದಿರುವುದು ಕಡಿಮೆ. 1996ರಲ್ಲಿ ಆರ್ಥರ್ ಬಂದರಿನ ಟ್ಯಾಸ್ಮೆನಿಯನ್ ಪಟ್ಟಣದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ದಾಳಿಯಲ್ಲಿ 35 ಮಂದಿ ಮೃತಪಟ್ಟಿದ್ದರು

*2014ರಲ್ಲಿ ಐವರು ಮೃತಪಟ್ಟಿದ್ದರು

*2018ರಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ವ್ಯಕ್ತಿಯೊಬ್ಬ ತನ್ನ ಸ್ವಂತ ಕುಟುಂಬದ 8 ಜನರಿಗೆ ಗುಂಡಿಕ್ಕಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದ

*2022ರಲ್ಲಿ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದರು

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ