LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಸಿಎಂ ಕುರ್ಚಿ ಕದನ ಮತ್ತೆ ಮುನ್ನೆಲೆಗೆ..!

ಬೆಂಗಳೂರು : ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾಗಡಿ ಕ್ಷೇತ್ರದ ಶಾಸಕ ಹೆಚ್ ಸಿ ಬಾಲಕೃಷ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರು ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಔತಣಕೂಟದಲ್ಲಿ ಭಾಗಿಯಾಗಿ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಗಹನವಾದ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಬಾಲಕೃಷ್ಣ ಸುದ್ದಿU ಗಾರ ರೊಂದಿಗೆ ಮಾತನಾಡಿ, ನನ್ನ ಹುಟ್ಟುಹಬ್ಬದ ಅಂಗವಾಗಿ ನಾವೆಲ್ಲಾ ಫ್ರೆಂಡ್ಸ್ ಒಟ್ಟು ಸೇರಿದ್ದೇವೆ. ಸಮಾನಮನಸ್ಕ ಶಾಸಕರು ಸುಮಾರು 40 ಮಂದಿ ಗೆಟ್ ಟುಗೆದರ್ ಮಾಡಿದೆವು, ಇಲ್ಲಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರು ಎಂದಲ್ಲ ಕಾಂಗ್ರೆಸ್ ನ ಶಾಸಕರಾಗಿ ಗುರುತಿಸಿಕೊಂಡಿದ್ದೇವೆ ಎಂದರು.
ಇಂದು ನಾವೆಲ್ಲಾ ಸೇರಿ ಕಾಂಗ್ರೆಸ್ ಪಕ್ಷದ ಭವಿಷ್ಯ, 2028ರ ಚುನಾವಣೆ ಬಗ್ಗೆ ಮಾಡಿದ್ದೇವೆ. ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಪದೇ ಪದೇ ಚರ್ಚೆಗೆ ಬರುತ್ತಿರುತ್ತದೆ. ಜನರಲ್ಲಿ ಗೊಂದಲ ಮೂಡುತ್ತದೆ, ಇದೇ ಪರಿಸ್ಥಿತಿ ಮುಂದುವರಿದುಕೊಂಡು ಹೋದರೆ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕಷ್ಟ. ಹಾಗಾಗಿ ಹೈಕಮಾಂಡ್ ಇದಕ್ಕೆ ಅಂತಿಮವಾದ ರೂಪವನ್ನು ಎಳೆಯಬೇಕೆಂದು ಒತ್ತಾಯ ಮಾಡಲು ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಹೈಕಮಾಂಡ್ ಗೆ ಒತ್ತಡ ಹೇರಲು ದೆಹಲಿ ಯಾತ್ರೆ ಮಾಡಲು ಮುಂದಾಗಿದ್ದೀರ ಎಂದು ಕೇಳಿದಾಗ, ದೆಹಲಿ ಯಾತ್ರೆ ಎಂದಲ್ಲ, ಕರ್ನಾಟಕದಲ್ಲಿ ಏನಾಗುತ್ತಿದೆ, ಏನು ಬೆಳವಣಿಗೆಗಳು ಆಗುತ್ತಿದೆ ಎಂದು ಹೈಕಮಾಂಡ್ ಗೆ ಗೊತ್ತಿದೆ, ಅವರೇನು ನಿದ್ದೆ ಮಾಡುತ್ತಿಲ್ಲ, ನಮಗೆ ಪ್ರತಿನಿತ್ಯ ಕ್ಷೇತ್ರಕ್ಕೆ ಹೋದರೆ ಸಿಎಂ ಬದಲಾವಣೆ ಬಗ್ಗೆಯೇ ಚರ್ಚೆ, ನಮಗೂ ಕೇಳಿ ಕೇಳಿ ಸಾಕಾಗಿ ಹೋಗಿದೆ. ನಮಗೆ ಕ್ಷೇತ್ರಕ್ಕೆ ಹೋದರೆ ಕಿರಿಕಿರಿಯಾಗುತ್ತಿದೆ, ಅದನ್ನು ತಪ್ಪಿಸಲು ಹೈಕಮಾಂಡ್ ಗೆ ಮನವಿ ಮಾಡಬೇಕು, ಅದಕ್ಕಾಗಿ ಏನು ಮಾಡಬೇಕೆಂದು ಮುಂದಿನ ದಿನಗಳಲ್ಲಿ ನೋಡುತ್ತೇವೆ ಎಂದರು.
ಹೈಕಮಾಂಡ್ ಮಧ್ಯ ಪ್ರವೇಶಿಸಿ ಈ ಗೊಂದಲಕ್ಕೆ ತೆರೆ ಎಳೆಯಲೇ ಬೇಕು, ಇಲ್ಲದಿದ್ದರೆ ಪಕ್ಷಕ್ಕೆ ಡ್ಯಾಮೇಜ್ ಆಗತ್ತೆ, ಯಾರನ್ನು ಸಿಎಂ ಮಾಡುತ್ತಾರೆ ಎಂಬುದಲ್ಲ, ಈ ಗೊಂದಲ ನಿವಾರಣೆಯಾಗಬೇಕೆಂಬುದು ನಮ್ಮೆಲ್ಲರ ಒತ್ತಾಸೆಯಾಗಿದೆ ಎಂದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ