LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Politics News

ಅಧಿಕಾರ ಹಂಚಿಕೆಯ ಬಿಕ್ಕಟ್ಟು, ಚೆಂಡು ಹೈಕಮಾಂಡ್ ಅಂಗಳಕ್ಕೆ

ಬೆಂಗಳೂರು :  ರಾಜ್ಯ ಕಾಂಗ್ರೆಸ್‍ನ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಪರಿಹಾರದ ಚೆಂಡು ಹೈಕಮಾಂಡ್ ಅಂಗಳ ತಲುಪಿರುವಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಂಗಳೂರಿನಿಂದ ದೆಹಲಿಗೆ ಪಯಣಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹ ವಿಮಾನ ನಿಲ್ದಾಣದವರೆಗೂ ಖರ್ಗೆ ಅವರ ಜತೆ ಪಯಣಿಸಿದ್ದು ನಾನಾ ಚರ್ಚೆಗೆ ಗ್ರಾಸವಾಗಿದೆ.ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವರು, ಶಾಸಕರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲರ ಜತೆ ಅಧಿಕಾರ ಹಂಚಿಕೆಯ ಜಟಾಪಟಿ ಬಗ್ಗೆ ಅಹವಾಲುಗಳನ್ನು ಆಲಿಸಿದ್ದ ಎಐಸಿಸಿಸ ಅಧ್ಯಕ್ಷ ಖರ್ಗೆ ಅವರು ಎಲ್ಲವನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿ ತಾರಕಕ್ಕೇರಿದ್ದ ಅಧಿಕಾರ ಹಂಚಿಕೆಯ ಜಟಾಪಟಿಯ ತೀವ್ರತೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿದ್ದರು.
ಕಾಂಗ್ರೆಸ್ ವರಿಷ್ಠ ರಾಹುಲ್‍ಗಾಂಧಿ ಅವರಿಗೆ ರಾಜ್ಯ ರಾಜಕೀಯ ವಿದ್ಯಮಾನಗಳನ್ನು ವಿವರಿಸಲು ಇಂದು ಬೆಳಗ್ಗೆ ದೆಹಲಿಗೆ ಪಯಣಿಸಿದ್ದು ಖರ್ಗೆ ಅವರು ಇಂದು ಇಲ್ಲವೆ ನಾಳೆ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿ ಎಲ್ಲವನ್ನು ಅವರ ಗಮನಕ್ಕೆ ತರುವರು.
ಸದಾಶಿವನಗರದ ಖರ್ಗೆ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಬಂದಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿ ವಕುಮಾರ್ ವಿಮಾನ ನಿಲ್ದಾಣದವರೆಗೂ ಖರ್ಗೆ ಅವರ ಕಾರಿನಲ್ಲೇ ಪಯಣಿಸಿ ಅವರ ಜತೆ ಸುದೀರ್ಘ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ.
ಎಐಸಿಸಿ ಅಧ್ಯಕ್ಷ ಖರ್ಗೆ ಅವರು ಕಳೆದ ಭಾನುವಾರ ರಾತ್ರಿ ದೆಹಲಿಯಿಂದ ಬಂದ ತಕ್ಷಣವೇ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ನಂತರ ಅವರು ಖರ್ಗೆ ಅವರನ್ನು ಭೇಟಿ ಮಾಡಿರಲಿಲ್ಲ ಇಂದು ಬೆಳಗ್ಗೆ ಮತ್ತೆ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ ಡಿ.ಕೆ.ಶಿವಕುಮಾರ್, ವಿಮಾನ ನಿಲ್ದಾಣದವರೆಗ ಅವರ ಜತೆ ಕಾರಿನಲ್ಲೇ ತೆರಳಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಮಾನ ನಿಲ್ದಾಣದಲ್ಲಿ ಖರ್ಗೆ ಅವರನ್ನು ದೆಹಲಿಗೆ ಬೀಳ್ಕೊಟ್ಟ ನಂತರ ಶಿವಕುಮಾರ್ ತಮ್ಮ ನಿವಾಸಕ್ಕೆ ವಾಪಸ್ಸಾದರು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ