ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಗಲು-ರಾತ್ರಿ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರು ಇಂದು ಮಾನವ ಸರಪಳಿ ನಿರ್ಮಿಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಹೋರಾಟದ ಏಳನೇ ದಿನವಾದ ಸೋಮವಾರ ಆಶಾ ಕಾರ್ಯಕರ್ತೆಯರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ತಮ್ಮ ಒಗ್ಗಟ್ಟು ಮತ್ತು ಹೋರಾಟದ ಸಂಕಲ್ಪವನ್ನು ಪ್ರದರ್ಶಿಸಿರುವ ಕಾರ್ಯಕರ್ತೆಯರು ಬೇಡಿಕೆ ಈಡೇರುವವರೆಗೂ ಪ್ರತಿಭಟನಾ ಸ್ಥಳದಿಂದ ತೆರಳುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಬಂದಿರುವ ಆಶಾ ಕಾರ್ಯಕರ್ತೆಯರು
ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ
ಹೋರಾಟದ ಏಳನೇ ದಿನವಾದ ಸೋಮವಾರ ಆಶಾ ಕಾರ್ಯಕರ್ತೆಯರು, ಮಾನವ ಸರಪಳಿ ನಿರ್ಮಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.
ತಮ್ಮ ಒಗ್ಗಟ್ಟು ಮತ್ತು ಹೋರಾಟದ ಸಂಕಲ್ಪವನ್ನು ಪ್ರದರ್ಶಿಸಿರುವ ಕಾರ್ಯಕರ್ತೆಯರು ಬೇಡಿಕೆ ಈಡೇರುವವರೆಗೂ ಪ್ರತಿಭಟನಾ ಸ್ಥಳದಿಂದ ಕದಲವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಮೈ ಕೊರೆಯುವ ಚಳಿ ಮತ್ತು ಗಾಳಿಯ ನಡುವೆಯೂ ಫ್ರೀಡಂ ಪಾರ್ಕ್‌ನಲ್ಲೇ ರಾತ್ರಿ ಕಳೆಯುತ್ತಿದ್ದಾರೆ. ನಿರಂತರ ಧರಣಿಯಿಂದಾಗಿ ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. ಜ್ವರ, ಅಸ್ತಮಾ, ವಾಕರಿಕೆ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಳಲಿದ ೧೭ ಆಶಾ ಕಾರ್ಯಕರ್ತೆಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.
ಸರ್ಕಾರದಿಂದ ಕೇವಲ ಮೌಖಿಕ ಭರವಸೆ ನೀಡಿದರೆ ಸಾಲದು, ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಅಧಿಕೃತ ಲಿಖಿತ ಆದೇಶ ಹೊರಡಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಪಟ್ಟು ಹಿಡಿದು ಹೋರಾಟ ನಡೆಸುತ್ತಿದ್ದಾರೆ.
ಆಶಾ ಕಾರ್ಯಕರ್ತೆಯರ ಪ್ರಮುಖ ಬೇಡಿಕೆ ಮಾಸಿಕ ಗೌರವಧನವನ್ನು ?೧೫,೦೦೦ಕ್ಕೆ ಹೆಚ್ಚಿಸಬೇಕು ಎಂಬುದಾಗಿದೆ. ಇದರ ಜೊತೆಗೆ ಸೇವೆಯಿಂದ ನಿವೃತ್ತಿಯಾದ ಸಂದರ್ಭದಲ್ಲಿ ?೫ ಲಕ್ಷ ನಿವೃತ್ತಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಸುಮಾರು ೪೫ ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಇವರ ಪ್ರಮುಖ ಜವಾಬ್ದಾರಿಯಾಗಿದೆ.
ಸರ್ಕಾರದ ಆರೋಗ್ಯ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಇಷ್ಟೆಲ್ಲಾ ಕೆಲಸ ನಿರ್ವಹಿಸು ತ್ತಿದ್ದರೂ ತಮಗೆ ದೊರೆಯುತ್ತಿರುವ ಗೌರವಧನ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.
ಸರ್ಕಾರ ಮತ್ತು ಆಶಾ ಕಾರ್ಯಕರ್ತೆಯರ ನಡುವಿನ ಈ ಬಿಕ್ಕಟ್ಟು ಯಾವಾಗ ಬಗೆಹರಿಯಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ. ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.