LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
Local News

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಸ್ ಟಿಕೆಟ್‍ಗೆ ಯುಪಿಐ ಸೇವೆ ಆರಂಭ

ಬೆಂಗಳೂರು: ಎಲ್ಲಾ ಸರ್ಕಾರಿ ಸೇವೆಗಳು, ಜನ ಸಾಮಾನ್ಯರ ನಡುವೆ ಜಿಡಿಟಲ್ ವಹಿವಾಟು ತೀವ್ರಗೊಂಡಿದ್ದರೂ ಸಹ ಜಾರಿಗೊಳ್ಳದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾರಿಗೆ ಬಸ್‍ನಲ್ಲಿ ಟಿಕೆಟ್ ಪಡೆಯಲು ಯುಪಿಐ ಸೇವೆ ಆರಂಭಿಸಿರಲಿಲ್ಲ. ಆದರೆ ಇದೀಗ ಯುಪಿಐ ಸೇವೆ ಆರಂಭಗೊಂಡಿದೆ.
ಇತ್ತೀಚೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕದ ರಾಜ್ಯ ನಿಯೋಗವು ಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರಿಗೆ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿರುವ ಸಾರಿಗೆ ಇಲಾಖೆಯು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಟಿಕೆಟ್‍ಗೆ ಯುಪಿಐ ಸೇವೆ ಆರಂಭಿಸಿದೆ.
ಮನವಿಯಲ್ಲಿ ಬಸ್ ಸಂಚಾರದ ಪ್ರಮಾಣವನ್ನು ಹೆಚ್ಚಿಸುವುದು, ನಾನ್‍ಸ್ಟಾಪ್ ಬಸ್ ಸೇವೆಗಳನ್ನು ಪ್ರಾರಂಭಿಸುವುದು ಹಾಗೂ QR ಕೋಡ್ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರುವುದು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲಕರವಾಗುವ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಉಲ್ಲೇಖಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಸಾರಿಗೆ ಇಲಾಖೆಯು ಕಲ್ಯಾಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಟಿಕೆಟ್‍ಗೆ ಯುಪಿಐ ಸೇವೆ ಆರಂಭಿಸಿದೆ.
ಇದಕ್ಕೆ ಹರ್ಷ ವ್ಯಕ್ತಪಡಿಸಿರುವ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕವು, ಕೆಎಸ್‍ಆರ್‍ಟಿಸಿಯು ಮನವಿUಸ್ಪಂದಿಸುವ ಮೂಲಕ ಟಿಕೆಟ್ ಖರೀದಿಯ ವೇಳೆ ಆಗುತ್ತಿದ್ದ ಚಿಲ್ಲರೆ ಸಮಸ್ಯೆಗೆ ಅಂತ್ಯ ಹಾಡಿದೆ. ಆ ಮೂಲಕ ಜನಸ್ನೇಹಿಯನ್ನಾಗಿಸಿರುವುದು ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದೆ. “ಇದೇ ರೀತಿಯಲ್ಲಿ ಬಸ್ ಸಂಚಾರದ ಪ್ರಮಾಣವನ್ನು ಹೆಚ್ಚಿಸುವುದರ ಕಡೆಗೂ ಕೂಡ ಇಲಾಖೆಯ ಅಧಿಕಾರಿಗಳು ಗಮನಹರಿಸಿ ಎಲ್ಲ ಸಮಸ್ಯೆಗಳಿಗೂ
ಪರಿಹಾರ ನೀಡಬೇಕು.
ಸೋಲಿಡಾರಿಟಿಯ ಮನವಿಯನ್ನು ಆಲಿಸಿ, ವ್ಯವಸ್ಥೆ ಕಲ್ಪಿಸಲು ನೆರವಾದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರಿಗೆ ಧನ್ಯವಾದಗಳನ್ನು ತಿಳಿಸಿದೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ