LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
State News

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಎರಡು ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ!

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಎರಡು ಪ್ರಕರಣಗಳ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ!

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ನಡೆದ ಎರಡು ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದೆ ಎಂದು ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ತಿಳಿಸಿದ್ದಾರೆ.
ವಿವಿಯ ಪರೀಕ್ಷಾ ವಿಭಾಗದಲ್ಲಿ ಜರುಗಿದ ಕಾನೂನುಬಾಹಿರ ಘಟಿಕೋತ್ಸವ ಪ್ರಮಾಣ ಪತ್ರ ವಿತರಣೆ ಪ್ರಕರಣ ಮತ್ತು ವಿವಿಯ ಇತಿಹಾಸ, ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ಅನಂತ್ ಎಲ್ ಝಂಡೇಕರ್ ಇವರು ವಿಶ್ವವಿದ್ಯಾಲಯದಲ್ಲಿನ ಸಹ ಪ್ರಾಧ್ಯಾಪಕ ಹುದ್ದೆಯ ನೇಮಕಾತಿ ಮತ್ತು ಪ್ರಭಾರ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿನ ಕೆಲ ಕಾನೂನುಬಾಹಿರ ಆದೇಶಗಳ ಕುರಿತಂತೆ ಕುಲಾಧಿಪತಿಗಳ ಕಚೇರಿಯಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ದೂರಿನ ಪ್ರಕರಣಗಳ ಕುರಿತಂತೆ ಇತ್ತೀಚೆಗೆ ಜರುಗಿದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ವಿಷಯ ಮಂಡಿಸಲಾಗಿದ್ದು, ಸಭೆಯು ವಿಸ್ತೃತವಾಗಿ ಚರ್ಚಿಸಿ ಈ ಪ್ರಕರಣಗಳ ಕುರಿತಂತೆ ಓರ್ವ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.
ಹಾಗಾಗಿ ಎರಡೂ ಪ್ರಕರಣಗಳ ಕುರಿತು ತನಿಖೆಗೆ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಡಿ.ಎಸ್.ಶಿಂಧೆ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಜಾರಿಗೊಳಿಸಲಾಗಿದ್ದು, ಇವರು ಪ್ರಕರಣ ಕುರಿತು 45 ದಿನಗಳ ಒಳಗಾಗಿ ತನಿಖೆ ಕೈಗೊಂಡು ವಿಶ್ವವಿದ್ಯಾಲಯಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ತನಿಖಾ ವರದಿಗಳು ವಿಶ್ವವಿದ್ಯಾಲಯಕ್ಕೆ ಸಲ್ಲಿಕೆಯಾದ ನಂತರ ತಪ್ಪಿತಸ್ಥರ ವಿರುದ್ಧ ಮುಂದಿನ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಯವರು ಹಾಗೂ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ರಿಲೀಫ್ಇಂದು ಸಂಪುಟ ವಿಸ್ತರಣೆಗೆ ಕ್ಷಣಗಣನೆ, ಮಂತ್ರಿ ಸ್ಥಾನ ಭಾಗ್ಯ ಯಾರಿಗೆ ಉಂಟು.. ಯಾರಿಗೆ ಇಲ್ಲ..!ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು: ಎಸ್‌ಪಿ ಜಾಹ್ನವಿ ಭೇಟಿ, ತನಿಖೆ ಆರಂಭಕತ್ತೆಬೆನ್ನೂರು ಬಳಿ ಬೋನಿಗೆ ಬಿದ್ದ ಚಿರತೆ; ದರೋಜಿ ಅರಣ್ಯಕ್ಕೆ ಸ್ಥಳಾಂತರಆಗಸ್ಟ್ 8ಕ್ಕೆ ‘ಟಾಕ್ಸಿಕ್’ ಟ್ರೇಲರ್; ಖಡಕ್ ಪೋಸ್ಟರ್‌ನಿಂದಲೇ ಹೈಪ್ ಹೆಚ್ಚಿಸಿದ ಯಶ್ಎಚ್ಚರ! ವಾಟ್ಸಾಪ್‌ಗೆ ಬರುತ್ತಿದೆ ‘ನಕಲಿ ಇನ್‌ಕಮ್ ಟ್ಯಾಕ್ಸ್ ನೋಟಿಸ್’; ಒಂದೇ ಕ್ಲಿಕ್‌ಗೆ ಖಾತೆ ಖಾಲಿಯಾಗಬಹುದುಇಂದು ಮೋದಿ ಮೈಸೂರಿಗೆ ! ವಿವೇಕ ಸ್ಮಾರಕ ಲೋಕಾರ್ಪಣೆ