LIVE TV LocalCrimeStateNationalInternationalPoliticsBusinessEducationEntertainmentSportsFeatureBeauty
National News

ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ವಿರಾಟ್‌

ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.
ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಈ ನಿರ್ಧಾರವನ್ನು ಇವರು ತೆಗೆದುಕೊಂಡಿದ್ದು ನಿಜಕ್ಕೂ ಟೀಮ್ ಇಂಡಿಯಾಕ್ಕೆ ದೊಡ್ಡ ಪೆಟ್ಟು ಬಿದ್ದಂತೆ ಆಗಿದೆ. ಇವರು ಈಗಾಗಲೇ ಟಿ20 ಕ್ರಿಕೆಟ್‌ ವಿದಾಯ ಹೇಳಿದ್ರು. ಇನ್ನು ಟೆಸ್ಟ್‌ ಕ್ರಿಕೆಟ್‌ಗೂ ವಿದಾಯ ಹೇಳಿದ್ದಾರೆ. ಇವರ ಈ ನಿರ್ಧಾರ ಅಭಿಮಾನಿಗಳಿಗೆ ತೀವ್ರ ಬೇಸರ ತರಿಸಿದೆ.

ಐಪಿಎಲ್‌ ಮಧ್ಯದಲ್ಲಿ ಟೀಮ್ ಇಂಡಿಯಾದ ಸೂಪರ್‌ ಸ್ಟಾರ್‌ ಬ್ಯಾಟರ್‌ ರೋಹಿತ್ ಶರ್ಮಾ ಸಹ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇವರ ಬೆನ್ನಲ್ಲೆ ವಿರಾಟ್ ಕೊಹ್ಲಿ ಸಹ ತಂಡದಿಂದ ಹಿಂದೆ ಸರಿದಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಬಾರ್ಡರ್‌ ಗವಾಸ್ಕರ್‌ ಸರಣಿ ಹಾಗೂ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ನೀರಸ ಪ್ರದರ್ಶನ ನೀಡಿದ್ದ ವಿರಾಟ್‌ ಟೀಕೆಗೆ ಗುರಿಯಾಗಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ಅವರು ಇತ್ತೀಚೆಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಾಹಿತಿ ನೀಡಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅವರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ ಎನ್ನಲಾಗಿತ್ತು.

Author
Kannada Nadu News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ : ಬಿ.ವೈ.ವಿಜಯೇಂದ್ರಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಮೋಹನ್ ಭಾಗವತ್ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಶ್ರೀಗಳಿಂದ ಅದ್ದೂರಿ ಚಾಲನೆದಿಢೀರ್ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!ಹಂಪಿ ಬಳಿ ಐದು ದಶಕಗಳ ಬಳಿಕ ಹುಲಿ ಪ್ರತ್ಯಕ್ಷ!43.80 ಲಕ್ಷ ಮತದಾರರಿಗೆ ಶೀಘ್ರದಲ್ಲೇ ಚುನಾವಣಾ ಆಯೋಗದ ನೋಟಿಸ್! ಅರ್ಧದಷ್ಟು ಭರ್ತಿಯಾದ ತುಂಗಭದ್ರಾ ಜಲಾಶಯ! 1 ಲಕ್ಷ ಕ್ಯುಸೆಕ್‌ಗೂ ಅಧಿಕ ಒಳಹರಿವುತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆರಾಜಕೀಯಕ್ಕಿಂತ ರಾಜ್ಯದ ಹಿತವೇ ಮೊದಲ ಆದ್ಯತೆ: ಕಾವೇರಿ ಹೋರಾಟದಲ್ಲಿ ಒಂದಾದ ಸರ್ವಪಕ್ಷಗಳು, ಡಿಕೆಶಿ ಸಂದೇಶಬಳ್ಳಾರಿಗೆ ಒಲಿದ ಮಂತ್ರಿಗಿರಿ: ಸಂಪುಟ ವಿಸ್ತರಣೆಯಲ್ಲಿ ಬಿ. ನಾಗೇಂದ್ರ ರೀ-ಎಂಟ್ರಿ!