E-PAPER
21 Nov 2026, 02:20:12 AM|
Gold₹12977/gGold24K ₹12,977/g - 22K ₹11,885/gTap for full details
Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Politics News

ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ನನಗೆ ಈಗ 80 ವರ್ಷ ವಯಸ್ಸಾಗಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಸಂವಿಧಾನ ದಿನಾಚರಣೆಯ ಸಂಬಂಧ ಪೂರ್ವಭಾವಿ ಸಭೆ ಬಳಿಕ ಔಪಚಾರಿಕವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೇಳುತ್ತಾರೆ. ವಯಸ್ಸಾಗಿದೆ ಹಾಗಾಗಿ ನಿಲ್ಲುವುದಿಲ್ಲ ಎಂದು ಹೇಳಿದರು.
ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ತಾವು ಆರನೇ ಸಾಲಿನಲ್ಲಿ ಕುಳಿತ ಬಗ್ಗೆ ಚರ್ಚೆ ಆಗುತ್ತಿರುವ ಬಗ್ಗೆ ಮತ್ತೆ ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ, ನಾನು ತಡವಾಗಿ ಹೋಗಿದ್ದೆ. ಹಾಗಾಗಿ ಹಿಂದೆ ಕುಳಿತೆ ಎಂದರು.
ನವೆಂಬರ್ 26ಕ್ಕೆ ಬೃಹತ್ ಸಂವಿಧಾನ ದಿನಾಚರಣೆ ಸಭೆ: ಮೈಸೂರಿನಲ್ಲಿ ನವೆಂಬರ್ 26 ರಂದು ಸಮಾಜ ಕಲ್ಯಾಣ ಇಲಾಖೆಯಿಂದ ಬೃಹತ್ ಸಂವಿಧಾನ ದಿನಾಚರಣೆ ಸಭೆ ಆಯೋಜನೆ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇದಕ್ಕಾಗಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಖಾಸಗಿ ಹೋಟೆಲ್​ನಲ್ಲಿ ನಡೆಯಿತು. ಸಭೆಯಲ್ಲಿ, ಕಾರ್ಯಕ್ರಮದ ಸಿದ್ದತೆ, ಉದ್ದೇಶ ಹಾಗೂ ಇತರ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಸಚಿವರಾದ ನರೇಂದ್ರಸ್ವಾಮಿ, ಯತೀಂದ್ರ ಸಿದ್ದರಾಮಯ್ಯ, ಚೆಲುವರಾಯಸ್ವಾಮಿ, ಕೆ.ಎಂ. ಶಿವಲಿಂಗೇಗೌಡ ಹಾಗೂ ಹಳೇ ಮೈಸೂರು ಭಾಗದ ಕಾಂಗ್ರೆಸ್​ ಶಾಸಕರು ಹಾಗೂ ಪ್ರಾಧಿಕಾರದ ಅಧ್ಯಕ್ಷರು ಭಾಗವಹಿಸಿದ್ದರು. ಆದರೆ, ಮಾಜಿ ಸಚಿವ ಹಾಗೂ ಶಾಸಕ ಡಾ.ಹೆಚ್.ಸಿ. ಮಹದೇವಪ್ಪ ಅವರ ಮಗ ಸಂಸದ ಸುನೀಲ್ ಭೋಸ್​ ಸಭೆಗೆ ಗೈರಾಗಿದ್ದರು.
ಯತೀಂದ್ರನಿಗೆ ಆಶೀರ್ವಾದ ಮಾಡಿ: ವರುಣ ಕ್ಷೇತ್ರದ 2028ರ ಚುನಾವಣೆಯಲ್ಲಿ ಮಗ ಯತೀಂದ್ರಗೆ ನನ್ನ ರೀತಿಯಲ್ಲಿ ಸಹಕಾರ ಹಾಗೂ ಬೆಂಬಲವನ್ನು ನೀಡಬೇಕು. ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗದಿದ್ದರೆ, ಮಗನಿಗೆ ಬೆಂಬಲಿಸಿ ಎಂದು ಬುಧವಾರ ವರುಣ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯನಗರಗಳ ಅಭಿವೃದ್ಧಿಗೆ ವಿಶೇಷ ಒತ್ತು: ರಸ್ತೆಗಳಿಗೆ ಹೊಸ ಗ್ರಿಡ್‌ ವ್ಯವಸ್ಥೆ - ಡಿ.ಕೆ. ಶಿವಕುಮಾರ್‌ಬರಗಾಲದ ಸಂಕಷ್ಟಕ್ಕೆ ಧೃತಿಗೆಡದಂತೆ ರೈತರಲ್ಲಿ ಆತ್ಮಸ್ಥೈರ್ಯ ತುಂಬಬೇಕು: ಸಂಸದ ಈ. ತುಕಾರಾಮ್ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್ಸ್ಥಳೀಯ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಲವು: ಆರ್.ಅಶೋಕ್ನೋಟು ಅಮಾನ್ಯೀಕರಣದ ನಂತರವೂ ಏಕೆ ನಕಲಿ ನೋಟು ಹಾವಳಿ ನಿಂತಿಲ್ಲ: ಪ್ರಿಯಾಂಕ್ ಖರ್ಗೆ ಮಹಿಳಾ ಸಚಿವರ ಆಯ್ಕೆ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ಡಿಸೆಂಬ‌ರ್ ಮೊದಲ ವಾರದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ಸಾಧ್ಯತೆಹಿರಿಯೂರು ಉಪಚುನಾವಣೆ: ದೋಸ್ತಿಯಲ್ಲಿ ಗೊಂದಲ, ಬಿಜೆಪಿಗರಿಗೆ ಕುಮಾರಸ್ವಾಮಿ ಖಡಕ್ ಸಲಹೆತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 4 ಟಿಎಂಸಿ ನೀರು ಸೇರ್ಪಡೆ